ಶಿವಮೊಗ್ಗ : ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 70 ಕ್ಕೂಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ , ಕೇಂದ್ರ ಸರ್ಕಾರ ಪಿಎಫ್ ಐ ನಿಷೇಧ ಮಾಡಲು ಮುಂದಾಗಿದೆ. ಇದನ್ನು ಕೇಂದ್ರ ಸರ್ಕಾರ ಮೊದಲೇ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ ಎಸ್ ಡಿಪಿಐ,ಪಿಎಫ್‌ಐ ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಎಂದರು.
ಇನ್ನು ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ,ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


