ಲಂಡನ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ವೇದಾಂತ ಗ್ರೂಪ್ ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಅವರನ್ನು ಲಂಡನ್ನಲ್ಲಿ ಗುರುವಾರ ಸಂಜೆ ಭೇಟಿ ಮಾಡಿ, ರಾಜ್ಯದಲ್ಲಿನ ಹೂಡಿಕೆ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ ಶೋ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್. ನಿರಾಣಿ ನೇತೃತ್ವದ ನಿಯೋಗ 7 ದಿನಗಳ ಯೂರೋಪ್ ಪ್ರವಾಸ ಕೈಗೊಂಡಿದೆ. ನಿಯೋಗವು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಒಳಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy