ಕೊರಟಗೆರೆ: ಬೈಚಾಪುರ ಗ್ರಾಮ ಪಂಚಾಯಿತಿಯ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಶೋಭಾ ಮತ್ತು ಉಪಾಧ್ಯಕ್ಷರಾಗಿ ವೆಂಕಟರೆಡ್ಡಿ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನ ತೆರವಾಗಿತ್ತು. ಅಧ್ಯಕ್ಷೆ ಸ್ಥಾನಕ್ಕೆ ಸಾಮಾನ್ಯ ಮಹಿಳಾ ವರ್ಗ ಮೀಸಲಿದ್ದು, ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಪುರುಷ(ಸಾಮಾನ್ಯ ವರ್ಗ) ಮೀಸಲು ಇತ್ತು ಅದರಂತೆ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಎಸ್ ನವೀನ್ ನಾಮಪತ್ರ ಸಲ್ಲಿಸಿದರು, ಉಪಾಧ್ಯಕ್ಷರ ಸ್ಥಾನಕ್ಕೆ ಬಿ.ಎಸ್.ವೆಂಕಟರೆಡ್ಡಿ ನಾಮಪತ್ರ ಸಲ್ಲಿಸಿದರು.
ಈ ಚುನಾವಣೆಯಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಪ್ರತಿ ಸ್ಪರ್ಧಿಯಾಗಿ ಯಾರು ನಾಮಪತ್ರ ಸಲ್ಲಿಕೆ ಮಾಡದೆ ಇರುವರರಿಂದ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ನಹೀದ ಜಮ್ ಜಮ್ ತಿಳಿಸಿದರು.
ನೂತನ ಅಧ್ಯಕ್ಷೆ ಶೋಭಾ ನವೀನ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಅಭಿವೃದ್ದಿ ಪಡಿಸಿ ಯಾವುದೇ ತೊಂದರೆ ತೊಡಕುಗಳು ಇಲ್ಲದೆ ಎಲ್ಲ ಸದಸ್ಯರ ವಿಶ್ವಾಸದಿಂದ ಉತ್ತಮವಾದ ಕೆಲಸ ಮಾಡುತ್ತೇನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿಯೇ ನಮ್ಮ ಗುರಿ ಎಂದು ತಿಳಿಸಿದರು.
ನೂತನ ಉಪಾಧ್ಯಕ್ಷ ವೆಂಕಟರೆಡ್ಡಿ ಮಾತನಾಡಿ, ನಾನು ಇದೇ ಊರಿನಲ್ಲಿ ಹುಟ್ಟಿ ಬೆಳೆದವನು ನನ್ನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ಸಮಸ್ಯೆ ನನಗೆ ತಿಳಿದಿದೆ ನನ್ನನ್ನು ಚಿಕ್ಕ ವಯಸ್ಸಿನಲ್ಲಿಯೇ ಈ ಮಟ್ಟಕ್ಕೆ ಬೆಳೆಸಿ ಇಂತಹ ಉನ್ನತ ಮಟ್ಟಕ್ಕೆ ತಂದು ನನಗೆ ನನ್ನ ಗ್ರಾಮಗಳ ಜನರ ಸೇವೆಗೆ ನಾನು ಸದಾ ಋಣಿಯಾಗಿ ಇರುತ್ತೇನೆ.
ಇನ್ನೂ ಮುಂದೆ ನನ್ನ ಅಧಿಕಾರ ಅವಧಿಯಲ್ಲಿ ಉತ್ತಮವಾದ ಕೆಲಸ ಕಾರ್ಯಗಳನ್ನು ಮಾಡಿ ನನ್ನ ಜನರ ಋಣ ತೀರಿಸುವ ಪಣ ತೊಟ್ಟಿದ್ದೇನೆ ಮತ್ತು ನಮ್ಮ ಗ್ರಾಮ ಪಂಚಾಯಿತಿಯ ಸದಸ್ಯರ ವಿಶ್ವಾಸದಿಂದ ಮತ್ತು ಮುಖಂಡರ,ಊರಿನ ಹಿರಿಯರ ಮಾರ್ಗ ದರ್ಶನದಲ್ಲಿ ಉತ್ತಮವಾದ ಕೆಲಸ ಮಾಡುತ್ತೇನೆ ಎಂದು ತಮ್ಮ ಮನದಾಳದ ಮಾತನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಚ್ ವೆಂಕಟಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್ ಆರ್.ಸಿ,ಗೋವಿಂದರಾಜು, ವೆಂಕಟಾಚಲಯ್ಯ,ಕರಿಯಪ್ಪ,ಲಕ್ಷ್ಮೀ ನರಸಪ್ಪ,ಕಾಂಚನ, ತಿಪ್ಪೇಶ್,ನಾಗರತ್ನಮ್ಮ,ಸರಸ್ವತಿ, ಮೀನಾಕ್ಷಿ,ರಾಮಲಕ್ಷ್ಮಮ್ಮ, ಮುಖಂಡರಾದ ಜಿತೇಂದ್ರಕುಮಾರ್,ರಾಜಣ್ಣ,ಪ್ರಕಾಶ್ ಎಲ್ ವಿ,ನಂದೀಶ್, ರವಿಕುಮಾರ್,ರಾಜಣ್ಣ,ಸಿದ್ದಪ್ಪ, ನರಸಿಂಹಮೂರ್ತಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಜರಿದ್ದರು.ಗ್ರಾಮಸ್ಥರು ಸಿಡಿಮದ್ದು ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy