ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಪ್ರಸನ್ನ ಬಿ ವರಾಳೆ ಅವರು ನೇಮಕವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಆಧರಿಸಿ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಾಧೀಶರಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ. ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


