nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕರ ಕುಂದು-ಕೊರತೆ ಸಭೆ: ಜನರನ್ನು ಅಲೆದಾಡಿಸದೇ ಸಮಸ್ಯೆ ಪರಿಹರಿಸಲು ಲೋಕಾಯುಕ್ತ ಅಧಿಕಾರಿಗಳ ಸೂಚನೆ
    ಕೊರಟಗೆರೆ October 2, 2022

    ಸಾರ್ವಜನಿಕರ ಕುಂದು-ಕೊರತೆ ಸಭೆ: ಜನರನ್ನು ಅಲೆದಾಡಿಸದೇ ಸಮಸ್ಯೆ ಪರಿಹರಿಸಲು ಲೋಕಾಯುಕ್ತ ಅಧಿಕಾರಿಗಳ ಸೂಚನೆ

    By adminOctober 2, 2022No Comments2 Mins Read
    lokayuktha

    ಕೊರಟಗೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಕುಂದು-ಕೊರತೆಗಳ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರು.

    ತಾಲ್ಲೂಕಿನ ಸುತ್ತಮುತ್ತ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಲೋಕಾಯುಕ್ತ ಸರ್ಕಲ್ ಇನ್ಸ್ ಪೆಕ್ಟರ್ ವಾಲಿಬಾಷಾ, ಸಾರ್ವಜನಿಕರ ಕುಂದುಕೊರತೆಗಳಿಗೆ  ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ಉಳಿದ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಕೂಡಲೇ ಜನರ ಸಮಸ್ಯೆಗಳನ್ನು  ಬಗೆಹರಿಸುವಂತೆ ಸ್ಥಳದಲ್ಲಿಯೇ ತಿಳಿಸಿದರು.


    Provided by

    ಬಳಿಕ ಮಾತನಾಡಿದ ಅವರು,  ಸಾರ್ವಜನಿಕರ ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳೀಯ ಅಧಿಕಾರಿಗಳು ಆದಷ್ಟು ಬೇಗ ಬಗೆಹರಿಸಿ ಕೊಡಿ, ಜನರು ಪದೇಪದೆ ಅಧಿಕಾರಿಗಳ ಬಲಿ ಅಲೆದಾಡುವುದು ಬೇಡ. ಹಾಗೆಯೇ ಸಾರ್ವಜನಿಕರು ಅಧಿಕಾರಿಗಳ ಬಳಿ ಹೋಗಬೇಕಾದರೆ ಸಂಬಂಧಪಟ್ಟ ದಾಖಲಾತಿಗಳ ಸಮೇತ ಹೋಗಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.

    ಲೋಕಾಯುಕ್ತರ ಸಭೆಯಲ್ಲಿ ಸುಮಾರು 15 ಕ್ಕೂ ಹೆಚ್ಚು ಸಮಸ್ಯೆಗಳನ್ನು ದಾಖಲಿಸಿಕೊಂಡು ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಖೇನ ಸಮಸ್ಯೆಗಳನ್ನ ಬಗೆಹರಿಸುವುದಾಗಿ ತಿಳಿಸಿದರು .

    ಲೋಕಾಯುಕ್ತ ಡಿ.ಎಸ್ ಪಿ ರವೀಶ್ ಮಾತನಾಡಿ, ಲೋಕಾಯುಕ್ತ ಅಧಿಕಾರಿಗಳ ಬಳಿ ಬರುವ ಸಾರ್ವಜನಿಕರ ಸಮಸ್ಯೆಗಳು ಸಣ್ಣಸಣ್ಣ ಸಮಸ್ಯೆಗಳಾಗಿರುತ್ತವೆ. ಅದನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಜನರನ್ನು ತಮ್ಮ ಕಚೇರಿಗಳಿಗೆ ಅಲೆದಾಡಿಸದೇ ಸಮಸ್ಯೆಗಳನ್ನು ಬಗೆಹರಿಸಿ ಕೊಡಿ, ಬಹಳ ದೂರದಿಂದ ಪುಟ್ಟ ಗ್ರಾಮಗಳಿಂದ ಬಡ ಜನರು ಬರುತ್ತಾರೆ. ಕಚೇರಿಗಳಿಗೆ ಬರಲು ಅವರ ಬಳಿ ಹಣವೂ ಇರುವುದಿಲ್ಲ, ಅಂಥವರ ಸಮಸ್ಯೆ ಚಿಕ್ಕದಾಗಿರುತ್ತದೆ. ಅದನ್ನು ದೊಡ್ಡದಾಗಿ ಮಾಡುವವರು ಅಧಿಕಾರಿಗಳೇ ಆಗಿದ್ದಾರೆ. ಬಂದಿರುವ ಸಾರ್ವಜನಿಕರ ಸಮಸ್ಯೆಗಳನ್ನು ನಾವು ಇಂದು ಗಮನಿಸಿದ್ದೇವೆ. ಆದಷ್ಟು ಬೇಗ ಈ ಎಲ್ಲ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಬಗೆಹರಿಸುತ್ತೇವೆ ಎಂದು ತಿಳಿಸಿ ಅಷ್ಟೇ ಅಲ್ಲ ನಾವು ಕೂಡ ಸ್ಥಳೀಯ ತಹಶೀಲ್ದಾರ್ ರವರ ಜೊತೆ ಕೆಲವು  ರೈತರ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡುತ್ತೇವೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

    ಲೋಕಾಯುಕ್ತ ಅಧಿಕಾರಿಗಳ ಮುಂದೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ತಹಶೀಲ್ದಾರ್ ನಹೀದಾ ಜಮ್ ಜಮ್ ರವರು ಮಾತನಾಡಿ, ಇಲ್ಲಿ ನೀಡಿರುವ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಈಗಾಗಲೇ ನಾನು ಗಮನ ಹರಿಸಿದ್ದೇನೆ. ಹಾಗೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ  ಇನ್ನು ಕೆಲವೇ ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಡಿ,ಎಸ್ ಪಿ ರವೀಶ್, ಇನ್ಸ್ ಪೆಕ್ಟರ್ ರಾಮರೆಡ್ಡಿ ,ತಾಲ್ಲೂಕು ದಂಡಾಧಿಕಾರಿಗಳಾದ ನಹೀದಾ ಜಮ್ ಜಮ್ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್.  ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.