ಬೆಂಗಳೂರು: ಬೆಳಗಾವಿಗಷ್ಟೇ ಸೀಮಿತವಾಗಿದ್ದ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಈ ಬಾರಿ ರಾಜ್ಯ ಮಟ್ಟದ ಮನ್ನಣೆ ಸಿಕ್ಕಿದ್ದು, ಅಕ್ಟೋಬರ್ 23ರಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದೆ.
ಈ ಹಿನ್ನೆಲೆ ಐತಿಹಾಸಿಕ ಕೇಂದ್ರಗಳಿಗೆ ವೀರಜ್ಯೋತಿ ಸಂಚರಿಸಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಪುರಭವನದಲ್ಲಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಕಿತ್ತೂರು ಉತ್ಸವಕ್ಕೆ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ.
ಕನ್ನಡ & ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಹಯೋಗದಲ್ಲಿ ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದರು.
ಕಿತ್ತೂರು ಉತ್ಸವದ ವೀರಜ್ಯೋತಿ ಯಾತ್ರೆಯು ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುತ್ತಿತ್ತು. ಆದರೆ ಈ ವರ್ಷ ವಿಶೇಷವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಕೇಂದ್ರ ಸ್ಥಾನಗಳಿಗೆ ವೀರಜ್ಯೋತಿ ಯಾತ್ರೆ ತಲುಪಲಿದ್ದು, ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಪುರಭವನದ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


