ರಾಯಚೂರು : ಕವಿತಾಳ ಪಟ್ಟಣದ ಸಮೀಪದ ಮಾನ್ವಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಕಾಪುರದ ಶಾಲೆಯ ವಿದ್ಯಾರ್ಥಿಗಳು ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕರ ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಗುಲ್ಬರ್ಗ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಕುರಿತು ಶಾಲೆಯ ಮುಖ್ಯ ಗುರುಗಳಾದ ಮಲ್ಲಪ್ಪ ಕವಲೂರು ಮಾತನಾಡುತ್ತಾ, ನಮ್ಮ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರು ಶಾಲೆಯ ಶಿಕ್ಷಕರ ಮತ್ತು ಹಳೆ ವಿದ್ಯಾರ್ಥಿಗಳು ಮಾರ್ಗದರ್ಶನದಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾದದ್ದು ತುಂಬಾ ಹೆಮ್ಮೆಯ ವಿಷಯ.
ಕಳೆದ ಎರಡು ವರ್ಷದ ಹಿಂದೆ ಕೊರೊನ ಲಾಕ್ ಡೌನ್ ಮುಂಚೆ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು.
ನಮ್ಮ ಶಾಲೆಯ ಮಕ್ಕಳು ದೈಹಿಕ ಶಿಕ್ಷಕರ ಕೊರತೆಯಲು ಕ್ರೀಡಾ ಪ್ರೇಮಿಗಳ ಪ್ರೋತ್ಸಾಹದಿಂದ ವಿಭಾಗ ಮಟ್ಟಕ್ಕೆ ಆಯ್ಕೆಯಾಗುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು.
ಶಾಲೆಯ ವಿಧ್ಯಾರ್ಥಿಗಳ ಸಾಧನೆಗೆ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರಾದ ರವಿಚಂದ್ರ , ಸುನಿಲ್ , ಬುದೇಶ್ , ಸಂತೋಷ್ , ಶಿವರಾಮ್ , ರಾಜೇಶ್ವರಿ ಮತ್ತು ಊರಿನ ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು, ಕ್ರೀಡಾ ಪ್ರೇಮಿಗಳು ಶುಭ ಹಾರೈಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


