ಬೆಳಗಾವಿ: ಭಾರೀ ಮಳೆಗೆ ಮಹಾದೇವ ಲಕ್ಷ್ಮಪ್ಪ ಬಾಗಿಲದ ಇವರಿಗೆ ಸೇರಿದ ಮನೆ ಕುಸಿದು ತಾಯಿ – ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಯರಗಟ್ಟಿ ಸಮೀಪದ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ.
ತಾಯಿ ಯಲ್ಲವ್ವ ಮಹಾದೇವ ಬಾಗಿಲದ(40), ಪ್ರಜ್ವಲ್(5) ಮಗು ಹಾಗೂ ಸಾವನಪ್ಪಿದ ದುರ್ದೈವಿಗಳು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಹಾಂತೇಶ ಮಠದ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್ ಐ ಬಸನಗೌಡ ನಿರ್ಲಿ, ಎಎಸ್ ಐ ವಾಯ್ ಎಂ. ಕಡಕೋಳ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


