ಹಿರಿಯೂರು: ನಗರದ ಹರಿಶ್ಚಂದ್ರ ಘಾಟ್ ನ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ರಾಷ್ಟ್ರೀಯ ಹಬ್ಬವನ್ನು ಆಚರಿಸಲಾಗಿತ್ತು .
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಮ್.ಕೊಟ್ಟಿಗೆಯ ಅಂಗನವಾಡಿ ಶಿಕ್ಷಕಿ ಶೀಭಾ ಜೋನಿತ, ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬರು ಸಹ ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ ಎಂದು ಶೀಭಾ ಜೋನಿತ ತಿಳಿಸಿದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


