ಹಿರಿಯೂರು: ಆಯುಧ ಪೂಜೆ ದಿನವೂ ಹಿರಿಯೂರಿನ ಜನತೆಗೆ ಬೆಲೆ ಏರಿಕೆಯ ಬಿಸಿ ತಾಗಿದ್ದು, ಹೂವು ಹಾಗೂ ಹಣ್ಣುಗಳ ಬೆಲೆ ಕೇಳಿ ಸಾರ್ವಜನಿಕರು ಸುಸ್ತಾಗಿದ್ದಾರೆ.
ಮಂಗಳವಾರ ಆಯುಧ ಪೂಜೆ ನಡೆಯುತ್ತಿದ್ದು, ಬುಧವಾರ ವಿಜಯದಶಮಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಜನರು ಹೂವು, ಹಣ್ಣು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿಗೆ ಮುಂದಾಗಿದ್ದಾರೆ. ಆದರೆ ಹಿರಿಯೂರು ತಾಲ್ಲೂಕಿನ ಗಾಂಧಿ ಸರ್ಕಲ್ ಬಳಿ ಇರುವ ನಗರದ ನೆಹರು ಮಾರುಕಟ್ಟೆಯಲ್ಲಿ ಹೂವಿನ ದರ ಜನರ ಕೈ ಸುಟ್ಟಿದೆ.
ಸ್ವಚ್ಛತೆ ಹೆಸರಿನಲ್ಲಿ ಹಣ ವಸೂಲಿ:
ಒಂದೆಡೆ ಬೆಲೆ ಏರಿಕೆಯಿಂದಾಗಿ ವ್ಯಾಪಾರದಲ್ಲಿ ಕೂಡ ನಷ್ಟದಲ್ಲಿರುವ ವ್ಯಾಪಾರಿಗಳಿಂದ ನಗರ ಸಭೆ ಅಧಿಕಾರಿಗಳು ಸ್ವಚ್ಛತೆ ನೆಪದಲ್ಲಿ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂತು. ಈ ಪ್ರದೇಶದಲ್ಲಿ ವಾಹನ ನಿಲುಗಡೆ ಸೇರಿದಂತೆ ಯಾವುದೇ ವ್ಯವಸ್ಥೆಗಳನ್ನು ಕಲ್ಪಿಸಿಕೊಡದ ನಗರ ಸಭೆಯಿಂದಾಗಿ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದರೆ, ಹಣ ವಸೂಲಿ ಮಾತ್ರ ಮಾಡಿ, ತನ್ನ ಕರ್ತವ್ಯ ಮರೆತಿರುವ ನಗರ ಸಭೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಾಹನದ ನಿಲುಗಡೆಯ ವ್ಯವಸ್ಥೆ ಸರಿಯಾದ ರೀತಿಯಲ್ಲಿ ಇಲ್ಲದ ಕಾರಣ ಬೆಳ್ಳಂಬೆಳಗ್ಗೆ ಉಂಟಾದ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


