ಮಧುಗಿರಿ: ತಾಲೂಕಿನ ದೊಡ್ಡೇರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಸಾರ್ವಜನಿಕರು ಪರದಾಡುತ್ತಿರುವ ಸ್ಥಿತಿಯಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಡ್ಯೂಟಿಯಲ್ಲಿರುವ ವೈದ್ಯರು ಹಾಗೂ ನರ್ಸ್ ಗಳು 3 ಗಂಟೆಗಳ ಡ್ಯೂಟಿ ಮುಗಿಸಿಕೊಂಡು ಹೋಗುತ್ತಿದ್ದಾರೆ. ಆ ಬಳಿಕ ಇಡೀ ಆಸ್ಪತ್ರೆ ವೈದ್ಯರು, ನರ್ಸ್ ಇಲ್ಲದೇ ಖಾಲಿ ಖಾಲಿಯಾಗಿರುವ ಪರಿಸ್ಥಿತಿ ಕಂಡು ಬಂದಿದೆ.
ಇನ್ನೂ ಚಿಕಿತ್ಸೆ ಪಡೆಯಲು ಬರುವ ರೋಗಿಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೇವಲ ಹೆಸರಿಗಷ್ಟೇ ಆಸ್ಪತ್ರೆ ಇದ್ದಂತಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ.
ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಈ ಭಾಗದ ಜನರಿಗೆ ಸರಿಯಾದ ಆರೋಗ್ಯ ಸೇವೆಗಳನ್ನು ಒದಗಿಸಲು ಮುಂದಾಗಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy