ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ.
ಕೋಠಾ ಗ್ರಾಮ ಪಂಚಾಯಿತಿ ಪಿಡಿಓ ಗಜದಂಡಯ್ಯ ಕೊಲೆಯಾದ ವ್ಯಕ್ತಿ.ಹಳೆ ವೈಷಮ್ಯ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪಿಡಿಓನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಲಿಂಗಸಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


