ಬೆಳಗಾವಿ : ಜಿಲ್ಲೆಯ ಸುಳೆಭಾವಿ ಗ್ರಾಮದಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ನಡೆದಿದೆ.
ಹಂತಕರು ಇಬ್ಬರು ಯುವಕರ ಮೇಲೆ ಅಟ್ಯಾಕ್ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳೆಭಾವಿ ಗ್ರಾಮದ ಮಹೇಶ್ ರಾಮಚಂದ್ರ ಮುರಾರಿ,25, ಪ್ರಕಾಶ್ ನಿಂಗಪ್ಪಾ ಉಪರಿ ಪಾಟೀಲ 22 ಎಂಬಾತರು ಹತ್ಯೆಗೀಡಾದ ದುರ್ದೈವಿಗಳು.
ಹಿರಿಯ ಪೋಲೀಸ್ ಅಧಿಕಾರಿಗಳು ಸುಳೆಭಾವಿ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಪರಿಸ್ಥಿತಿ ಈಗ ಉದ್ವಿಗ್ನವಾಗಿದ್ದು ಮಾರಿಹಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy