ತಿಪಟೂರು: ತಾಲೂಕಿನ ಕಿಬ್ಬನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕರಾದ ರಾಹುಲ್ ಗಾಂಧಿಯವರು ಭಾರತ ಐಕ್ಯತೆ ಯಾತ್ರೆ ನಡೆಸಲಿದ್ದು, ಸಾರ್ವಜನಿಕರು ಪಕ್ಷಾತೀತವಾಗಿ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ಕೆ.ಷಡಕ್ಷರಿ ಮನವಿ ಮಾಡಿಕೊಂಡರು.
9ರಂದು ಭಾನುವಾರ ತಿಪಟೂರು ತಾಲೂಕು ಕಿಬ್ಬನಹಳ್ಳಿಯಲ್ಲಿ ಭಾರತ ಐಕ್ಯತಾ ಯಾತ್ರೆ ನಡೆಯಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಯಾತ್ರೆ ನಡೆಯಲಿದೆ ಎಂದು ಅವರು ತಿಳಿಸಿದರು.
ಸ್ವಾತಂತ್ರ ಪೂರ್ವದಲ್ಲಿ ಸ್ವಾತಂತ್ರ ಪಡೆಯಲು ಎಲ್ಲಾ ಧರ್ಮದವರು ಸೇರಿ ಹೋರಾಟ ಮಾಡಿ, ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರವನ್ನು ಪಡೆಯಲಾಯಿತು. ಅಂತೆಯೇ ಬಿಜೆಪಿ ಆಡಳಿತದಲ್ಲಿ ಧರ್ಮ ದ್ವೇಷ, ಬೆಲೆ ಏರಿಕೆ ಮೊದಲಾದವುಗಳ ವಿರುದ್ಧ ಈ ಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ತಾಲೂಕು ಬ್ಲಾಕ್ ಅಧ್ಯಕ್ಷ ಮಡೆನೂರು ಕಾಂತರಾಜ್, ಮಾಜಿ ಪುರಸಭೆ ಅಧ್ಯಕ್ಷ ಟಿ.ಎನ್.ಪ್ರಕಾಶ್, ಲೋಕನಾಥ್ ಸಿಂಗ್ ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy