ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ದಿಢೀರ್ ಭೇಟಿ ನೀಡಿ ಆಸ್ಪತ್ರೆಯೆ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.
ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ಅವರು, ರೋಗಿಗಳು ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದರು. ಆಸ್ಪತ್ರೆಯಲ್ಲಿನ ಸೌಲಭ್ಯ, ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು.
ಈ ನಡುವೆ ಬಹುತೇಕ ವೈದ್ಯರು ರಜೆ ಹಾಕಿದ್ದ ಹಿನ್ನೆಲೆ ನ್ಯಾ.ಬಿ.ವೀರಪ್ಪ ಗರಂ ಆದರು. ಚರ್ಮ ವಿಭಾಗದಲ್ಲಿ 6 ವೈದ್ಯರ ಪೈಕಿ 5 ವೈದ್ಯರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ತರಾಟೆ ತೆಗೆದುಕೊಂಡ ನ್ಯಾ.ಬಿ.ವೀರಪ್ಪ, ಮೇಜರ್ ಆದ್ರೆ ಒಬ್ಬರು ಹೇಗೆ ಕೆಲಸ ಮಾಡುತ್ತೀರಿ ಎಂದು ವೈದ್ಯೆಗೆ ಪ್ರಶ್ನಿಸಿದರು. ಜಡ್ಜ್ ಪ್ರಶ್ನೆಗೆ ವೈದ್ಯೆ ಉತ್ತರ ನೀಡಲು ತಡಬಡಾಯಿಸಿದ ಘಟನೆ ನಡೆಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


