ವಿಜಯಪುರ: ಯಡಿಯೂರಪ್ಪ ರಾಜ್ಯಪ್ರವಾಸ ಮಾಡಿ 180 ಸೀಟು ಗೆದ್ದುಕೊಡುವುದಾದರೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಲೇವಡಿ ಮಾಡುವುದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಂದುವರಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಯಡಿಯೂರಪ್ಪ ರಾಜ್ಯಪ್ರವಾಸ ಮಾಡಿ 180 ಸೀಟು ಗೆದ್ದುಕೊಡುವುದಾದರೆ ಮಾಡಲಿ, ತನಗೇನೂ ಅಭ್ಯಂತರವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಭಾರತ ಜೋಡೋ ಯಾತ್ರೆ ಬಗ್ಗೆ ಕೇಳಿದಾಗ ಯತ್ನಾಳ್, ಪ್ರಧಾನ ಮಂತ್ರಿ ಮೋದಿಯವರು ಭ್ರಷ್ಟರನ್ನು ಬೀದಿಗೆ ತರುತ್ತೇನೆ ಅಂತ ಹೇಳಿದ್ದರು, ಅದರ ಫಲಶೃತಿಯಾಗಿಯೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೊದಲಾದವರೆಲ್ಲ ರೋಡಿಗೆ ಬಂದಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


