ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನ.22 1939ರಲ್ಲಿ ಜನಿಸಿದ ಅವರು, ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಜನರ ಮನಸ್ಸಿನಲ್ಲಿ ದಶಕಗಳ ಕಾಲ ಅಚ್ಚಳಿಯದೆ ಉಳಿದಿದ್ದು, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು.
ಮುಲಾಯಂ ಸಿಂಗ್ ಯಾದವ್ ಹಿನ್ನೆಲೆ:
ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದ ಸಾಧಾರಣ ಕುಟುಂಬದಲ್ಲಿ ನ.22, 1939 ಜನಿಸಿದರು. ಆಗ್ರಾ ವಿವಿಯಿಂದ M.A ಪದವಿ ಪಡೆಯುವ ಅವರು, ಲೋಹಿಯಾ & ರಾಜ್ ನಾರಾಯಣ್ ರಂತಹ ಮಹಾನಾಯಕರ ಮಾರ್ಗದರ್ಶನದಲ್ಲಿ 1967ರಲ್ಲಿ ಉತ್ತರಪ್ರದೇಶ ವಿಧಾನಸಭೆಗೆ ಚುನಾಯಿತರಾದರು. ಕಾಲಾನಂತರದಲ್ಲಿ ಸಮಾಜವಾದಿ ಪಕ್ಷವನ್ನು ಕಟ್ಟಿದರು. ಮೂರು ಬಾರಿ ಸಿಎಂ ಆಗಿಯೂ ಆಯ್ಕೆಯಾದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾದ ಅವರು ರಕ್ಷಣಾ ಸಚಿವರಾಗಿಯು ಕಾರ್ಯನಿರ್ವಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy