nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಟೋಬರ್ 13ರಂದು ಬೆಂಗಳೂರಿನಲ್ಲಿ RPI ರಾಜ್ಯ ಮಂಡಳಿ ಸಭೆ
    ತುಮಕೂರು October 10, 2022

    ಅಕ್ಟೋಬರ್ 13ರಂದು ಬೆಂಗಳೂರಿನಲ್ಲಿ RPI ರಾಜ್ಯ ಮಂಡಳಿ ಸಭೆ

    By adminOctober 10, 2022No Comments1 Min Read
    rpi

    ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(RPI) ರಾಜ್ಯ ಮಂಡಳಿ ಸಭೆಯು ಅಕ್ಟೋಬರ್ 13ರ ಗುರುವಾರ ಬೆಂಗಳೂರಿನ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಆರ್ ಪಿಐ ಮುಖಂಡರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಆರ್ ಪಿಐಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವರಾದ ರಾಂದಾಸ್ ಅಠವಳೆ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ರಾಜ್ಯ ಮಂಡಳಿಯ ನಿರ್ಣಯಗಳನ್ನು ಅಂಗೀಕರಿಸಲಿದ್ದಾರೆ.

    ಬೆಳಗ್ಗೆ 10:30ರಿಂದ 12ಗಂಟೆಯವರೆಗೆ ಸಕ್ರಿಯ ಸದಸ್ಯರ ನೋಂದಣಿ ನಡೆಯಲಿದೆ. ಮಧ್ಯಾಹ್ನ 12ರಿಂದ ಮಧ್ಯಾಹ್ನ 1:30ರವರೆಗೆ ಉದ್ಘಾಟನಾ ಗೋಷ್ಠಿ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮತ್ತೋರ್ವ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಜೆ.ಸಿ.ವೆಂಕಟರಮಣಪ್ಪ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ.

    ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರ ಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿಗಳಾಗಿ ಹೈಕೋರ್ಟ್ ವಕೀಲರಾದ ವಿ.ಉಮಾಶಂಕರ್ ಹಾಗೂ ಬೆಂಗಳೂರಿನ ಹಿರಿಯ ವಕೀಲರಾದ ಸಣ್ಣಾ ನಾಯಕ್ ಅವರು ಕಾರ್ಯನಿರ್ವಹಿಸಲಿದ್ದಾರೆ.

    ಸಂಜೆ 6 ಗಂಟೆಗೆ ಸಮಾರೋಪ ಗೋಷ್ಠಿ ನಡೆಯಲಿದ್ದು, ಆರ್ ಪಿಐ ರಾಷ್ಟ್ರೀಯ ಅಧ್ಯಕ್ಷರಾದ ರಾಂದಾಸ್ ಅಠವಳೆ ಅವರು ಮುಖ್ಯಭಾಷಣ ಮಾಡಲಿದ್ದಾರೆ. ಡಾ.ಎಂ.ವೆಂಕಟಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಿರ್ಣಯ ಮಂಡನೆ ಮಾಡಲಿದ್ದಾರೆ. ಗೌತಮ ಬುದ್ಧರ ಕುರಿತ ಯಕ್ಷಗಾನ ನಾಟಕ ಪ್ರದರ್ಶನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.

    ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಆರ್ ಪಿಐ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ತುಮಕೂರು ಜಿಲ್ಲೆಯ ಎಲ್ಲ ಆರ್ ಪಿಐ ಮುಖಂಡರು ಭಾಗವಹಿಸುವಂತೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಹೆಚ್.ರಾಮಯ್ಯ, ಜಿಲ್ಲಾಧ್ಯಕ್ಷರಾದ ನಟರಾಜು ಜಿ.ಎಲ್. ಹಾಗೂ ಜಿಲ್ಲಾ ಮುಖಂಡರಾದ ಎಂ.ರಾಮಯ್ಯ, ಧನರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.