nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026
    Facebook Twitter Instagram
    ಟ್ರೆಂಡಿಂಗ್
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣಪತ್ರ
    ಜಿಲ್ಲಾ ಸುದ್ದಿ October 10, 2022

    ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣಪತ್ರ

    By adminOctober 10, 2022No Comments2 Mins Read
    indian post

    ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ, ಆಸ್ಪತ್ರೆಗಳಿಗೆ ಅಲೆದಾಡಬೇಕಿಲ್ಲ. ಕಂದಾಯ ಇಲಾಖೆ ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನುಮುಂದೆ ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್‌ನಲ್ಲಿ ನಿಮ್ಮ ಮನೆಗೆ ಬರಲಿದೆ. ಆನ್‌ಲೈನ್ & ಆಫ್‌ಲೈನ್‌ನಲ್ಲಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅಂಚೆ ಇಲಾಖೆಯೇ ಸಂಬಂಧಪಟ್ಟ ಕಚೇರಿಗಳಿಂದ ಅದನ್ನು ಸಂಗ್ರಹಿಸಿ ನಿಖರವಾದ ವಿಳಾಸಕ್ಕೆ ತಲುಪಿಸಲಿದೆ. ರಾಜ್ಯದ ಎಲ್ಲಾ ಅಂಚೆ ಕಚೇರಿಗಳು ಕೂಡ ಈ ಸೇವೆಯನ್ನು ಒದಗಿಸಲಿವೆ.

    ಹೇಗಿದೆ ಈ ಸೇವೆ?


    Provided by
    Provided by

    ಹಾಗೆಯೇ ವಿವಿಧ ಕಾರಣಗಳಿಗಾಗಿ ಒಂದೊಮ್ಮೆ ಮರಣ ಸಂಭವಿಸಿದ್ದಲ್ಲಿ, ಅಂತಹವರು ಮರಣ ಪ್ರಮಾಣ ಪತ್ರಕ್ಕಾಗಿ ನಗರದ ಸ್ಥಳೀಯ ಸಂಸ್ಥೆಗಳಿಂದಲೋ ಅಥವಾ ಸರಕಾರಿ ಆಸ್ಪತ್ರೆಯಿಂದಲೋ ಪ್ರಮಾಣ ಪತ್ರಗಳನ್ನು ಪಡೆಯಬೇಕಾಗಿರುತ್ತದೆ.

    ಇನ್ಮುಂದೆ ಇರಲ್ಲ ಅಲೆದಾಟ:

    ಆದರೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಇದಕ್ಕಾಗಿ ನಡೆಯುತ್ತಿದ್ದ ಅಲೆದಾಟವನ್ನು ತಪ್ಪಿಸಿದೆ. ಸುಲಭವಾಗಿ ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ವಿಳಾಸಕ್ಕೆ ಜನನ ಇಲ್ಲವೇ ಮರಣ ಪ್ರಮಾಣ ಪತ್ರಗಳನ್ನು ತಲುಪಿಸುತ್ತಿದೆ.

    ಅರ್ಜಿ ಸಲ್ಲಿಸುವುದು ಹೇಗೆ?:

    ಜನನ ಅಥವಾ ಮರಣ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವವರು ಖಾಸಗಿ ಆಸ್ಪತ್ರೆಗಳಾದರೆ ಸ್ಥಳೀಯ ಸಂಸ್ಥೆ, ಸರಕಾರಿ ಆಸ್ಪತ್ರೆಗಳಲ್ಲಾದರೆ ಬಹುತೇಕ ಅಲ್ಲಿಯೇ ಜನನ/ಮರಣ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗುತ್ತದೆ. ಹಾಗಾಗಿ ಅರ್ಜಿದಾರರು ಸಂಬಂಧಿಸಿದ ಪ್ರಮಾಣ ಪತ್ರಕ್ಕೆ ಅರ್ಜಿ ಭರ್ತಿ ಮಾಡಿ ಕೊಡುವ ವೇಳೆಯೇ ಸ್ಪೀಡ್ ಪೋಸ್ಟ್ ಮೂಲಕ ಪ್ರಮಾಣ ಪತ್ರ ಪಡೆಯುವುದಾಗಿ ಮತ್ತೊಂದು ಕಿರು ಅರ್ಜಿಯನ್ನು ಸಲ್ಲಿಸಬೇಕು. ಹಾಗಿದ್ದಲ್ಲಿ ನಿಗದಿತ ದಿನಗಳಲ್ಲಿ ಅಂಚೆ ಮೂಲಕ ನೀವು ಬಯಸಿದ ಪ್ರಮಾಣ ಪತ್ರ ಪಡೆಯಬಹುದಾಗಿದೆ.

    ಕನಿಷ್ಟ ಅಂಚೆ ವೆಚ್ಚ:

    ಹೀಗೆ ಅರ್ಜಿ ತುಂಬಿ ಪ್ರಮಾಣ ಪತ್ರವನ್ನು ಸ್ಪೀಡ್ ಪೋಸ್ಟ್ ಮೂಲಕ ಬಯಸುವವರು ತಮ್ಮ ಪ್ರಮಾಣ ಪತ್ರ ಪಡೆಯುವ ವೇಳೆ ಪೋಸ್ಟ್ ಮ್ಯಾನ್ ಮೂಲಕ ನಿಗದಿಪಡಿಸಿದ ₹100 ಅನ್ನು ನೀಡಿ ಪಡೆಯಬೇಕಾಗುತ್ತದೆ.

    ಸ್ಪೀಡ್ ಪೋಸ್ಟ್​ನಿಂದ ಲಾಭವೇನು?

    ಸಾಮಾನ್ಯವಾಗಿ ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಮಗು ಜನಿಸಿದ್ದಲ್ಲಿ, ಜನನ ಪ್ರಮಾಣ ಪತ್ರವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಪಡೆಯಬೇಕಾಗುತ್ತದೆ.

    ಹಾಗೆ ಮಗುವಿನ ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಎರಡೆರಡು ಬಾರಿ ಕಚೇರಿಗೆ ತೆರಳಬೇಕಿತ್ತು. ಏಕೆಂದರೆ, ಮೊದಲಿಗೆ ಒಮ್ಮೆ ಅರ್ಜಿ ಸಲ್ಲಿಸಿ ಹೋದರೆ, ಮತ್ತೊಮ್ಮೆ ಪ್ರಮಾಣ ಪತ್ರ ಪಡೆಯಲು ಆಗಮಿಸಬೇಕಿತ್ತು. ಅದರಲ್ಲೂ ಸರ್ವರ್ ಸಮಸ್ಯೆಗಳು ಉಂಟಾದರೆ ಮತ್ತೊಂದು ಬಾರಿ ಹೋಗುವ ಪ್ರಮೇಯವೂ ಎದುರಾಗುತ್ತಿತ್ತು. ಆದರೆ, ಮಂಗಳೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕ ಶ್ರೀಹರ್ಷ ಇವರಿಂದ ಮೂಡಿದ ಅದ್ಭುತ ಪರಿಕಲ್ಪನೆ ಈಗ ಅನಗತ್ಯ ಅಲೆದಾಟವನ್ನು ತಪ್ಪಿಸಿದೆ.

    ಎಲ್ಲೆಲ್ಲೆ ಸೇವೆ ಲಭ್ಯ?:

    ಮಂಗಳೂರು ಅಂಚೆ ವಿಭಾಗವು ಆರಂಭಿಕ ಹಂತದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಜೊತೆ ಒಡಂಬಡಿಕೆ ನಡೆಸಿಕೊಳ್ಳುವ ಮೂಲಕ ಇಂತಹ ವಿನೂತನ ಕಾರ್ಯಕ್ರಮ ಆರಂಭಿಸಿತ್ತು. ಇದೀಗ ಈ ಸೇವೆಯು ಮಂಗಳೂರಿನ ಜಿಲ್ಲಾ ಆಸ್ಪತ್ರೆಗಳಾದ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಲೇಡಿ ಗೋಶನ್ ಸರಕಾರಿ ಆಸ್ಪತ್ರೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಾದ ಕೋಟೆಕಾರ್ ಪಟ್ಟಣ ಪಂಚಾಯತ್, ಕಿನ್ನಿಗೋಳಿ ಪಟ್ಟಣ ಪಂಚಾಯತ್, ಬಜ್ಪೆ ಪಟ್ಟಣ ಪಂಚಾಯತ್, ಮುಲ್ಕಿ ಪಟ್ಟಣ ಪಂಚಾಯತ್, ಸೋಮೇಶ್ವರ ನಗರ ಪುರಸಭೆ ಹಾಗೂ ಉಳ್ಳಾಲ ನಗರ ಪುರಸಭೆಗಳಿಗೆ ವಿಸ್ತರಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ:

    ಆಸಕ್ತರು ಈ ಕುರಿತು ಯಾವುದೇ ಹೆಚ್ಚಿನ ಮಾಹಿತಿ ಪಡೆಯಲು ಮಂಗಳೂರು ಅಂಚೆ ವಿಭಾಗದ ಕಚೇರಿ ದೂರವಾಣಿ 0824-2218400 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಜಿಲ್ಲೆಯ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿ, ಮಧ್ಯಾಹ್ನದ ವೇಳೆಗೆ…

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.