ಮಂಡ್ಯ: ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂತರಾಜು ಬಂಧಿತ ಆರೋಪಿ. 9 ವರ್ಷದ ಬಾಲಕಿ ನಿನ್ನೆ ಟ್ಯೂಷನ್ ಗೆಂದು ತೆರಳಿದ್ದಳು. ಬಾಲಕಿ ವಾಪಸ್ ಮನೆಗೆ ಬಾರದೆ ಇದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದರು. ನಂತರ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾಗಿತ್ತು.
ಇದೀಗ ಟ್ಯೂಷನ್ ನಡೆಸುತ್ತಿದ್ದ ಕಾಂತರಾಜು ಎಂಬುವವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಬಳಿಕ ಆರೋಪಿ ಕಾಂತರಾಜು ಶವವನ್ನ ಸಾಗಿಸಲು ಯತ್ನಿಸಿದ್ದು ನಂತರ ಸಂಪ್ ನಲ್ಲಿ ಎಸೆದು ಪರಾರಿಯಾಗಿದ್ದ ಎನ್ನಲಾಗಿದೆ. ಇದೀಗ ಆರೋಪಿ ಕಾಂತರಾಜುನನ್ನ ಮಳವಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


