ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ 3ನೇ ರೈಲ್ವೆ ಗೇಟ್ ಫ್ಲೈ ಓವರ್ ಉದ್ಘಾಟನೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಹಿಷ್ಕರಿಸಿದರು.
ರೈಲ್ವೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನೂ ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮಕ್ಕೆ ಹಾಜರಾಗದೆ ನನ್ನ ಪ್ರತಿಭಟನೆಯನ್ನು ದಾಖಲಿಸುತ್ತಿದ್ದೇನೆ. ಈ ಕುರಿತು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


