ನವದೆಹಲಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಮಂಗಳವಾರ ನವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರ ಅಧಿಕೃತ ನಿವಾಸದ ಆವರಣದಲ್ಲಿ ನಡೆದ ಫ್ಲೆಕ್ಸಿ-ಫ್ಯುಯೆಲ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ಸ್ (ಎಫ್ಎಫ್ವಿ-ಎಸ್ಎಚ್ಇವಿ) ಮೇಲಿನ ಮೊದಲ ಪ್ರಾಯೋಗಿಕ ಯೋಜನೆಯಾದ ಟೊಯೋಟಾ ಕೊರೊಲ್ಲಾ ಆಲ್ಟಿಸ್ ಹೈಬ್ರಿಡ್ಗೆ ಚಾಲನೆ ನೀಡಿದರು.
ಭಾರತದಲ್ಲಿ ಹೈಬ್ರಿಡ್ ವಾಹನಗಳ ಕಾರ್ಯಸಾಧ್ಯತೆಯನ್ನು ನಿರ್ಣಯಿಸುವುದು ಪೈಲಟ್ ಯೋಜನೆಯ ಗುರಿಯಾಗಿದೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಎಥೆನಾಲ್-ಚಾಲಿತ ಫ್ಲೆಕ್ಸ್ ಇಂಧನ ವಾಹನಗಳಲ್ಲಿ ಚಲಿಸಬಹುದು ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್-ಹೈಬ್ರಿಡ್ ವಾಹನಗಳಲ್ಲಿ ಎಥೆನಾಲ್ ಬಳಕೆಯನ್ನು ಸಕ್ರಿಯಗೊಳಿಸುತ್ತದೆ.
ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ಗಡ್ಕರಿ ಅವರು, ಟಿವಿಎಸ್, ಬಜಾಜ್ ಮತ್ತು ಹೀರೋ ಮೋಟೊಕಾರ್ಪ್ ಈಗಾಗಲೇ ಎಥೆನಾಲ್ ವಾಹನಗಳೊಂದಿಗೆ ಸಿದ್ಧವಾಗಿದ್ದು, ನಾವು ಎಲೆಕ್ಟ್ರಿಕ್, ಎಥೆನಾಲ್, ಮೆಥನಾಲ್, ಬಯೋಡೀಸೆಲ್ ಮತ್ತು ಹೈಡ್ರೋಜನ್ ಇಂಧನಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದರು.
ಈ ವೇಳೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಖಾತೆ ಸಚಿವ ಭೂಪೇಂದ್ರ ಯಾದವ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಶ್ರೀ ರಾಮೇಶ್ವರ ತೇಲಿ, ಭಾರಿ ಕೈಗಾರಿಕೆಗಳ ಕೇಂದ್ರ ಸಚಿವ ಮಹೇಂದ್ರ ನಾಥ್ ಪಾಂಡೆ ಮತ್ತು ಟೊಯೋಟಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಸಕಾಜು ಯೋಶಿಮುರಾ, ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy