ನನ್ನ ಅವಧಿಯ ಸೋಲಾರ್ ಯೋಜನೆ ಬಗ್ಗೆ ಚರ್ಚೆಗೆ ಸಿದ‍್ಧ. ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನ ನೀಡಿದರು.
ಇಂದು ಮಾಧ್ಯಮಗಳ ಜೊತೆ ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವಿರುದ್ಧ ಸೋಲಾರ್ ಹಗರಣ ಆರೋಪ ಮಾಡಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ. ಸಿಎಂ ಯಾಕೆ ಸುಮ್ಮನಿದ್ದಾರೆ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಲಿ ಎಂದು ಸವಾಲು ಹಾಕಿದರು.
ನಾಳೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ನಾಳೆ 1 ಗಂಟೆಗೆ ರಾಹುಲ್ ಗಾಂಧಿ ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ. ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಭಾಗಿಯಾಗಲಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


