ಮಧುಗಿರಿ: ಮಹಿಳೆಯ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ ಕಸಬಾ ಸಿದ್ದಾಪುರ ಕೆರೆ ಎಸೆದಿರುವ ಘಟನೆ ನಡೆದಿದ್ದು, ಬೇರೆ ಯಾವುದೋ ಪ್ರದೇಶದಲ್ಲಿ ಹತ್ಯೆ ಮಾಡಿ ಇಲ್ಲಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ಎಸೆದು ನಾಲ್ಕೈದು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಚೀಲದಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರು ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುಮಾರು 35ರಿಂದ 45 ವರ್ಷದ ಮಹಿಳೆಯ ಮೃತದೇಹ ಇದಾಗಿದ್ದು, ಹತ್ಯೆ ಮಾಡಿದ ಬಳಿಕ ಚೀಲಕ್ಕೆ ತುಂಬಿ ಕೆರೆಗೆ ಎಸೆದು ಹೋಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ಕೆರೆಯಿಂದ ಮೇಲೆತ್ತಲಾಗಿದೆ. ಆದರೆ, ಮಹಿಳೆಯ ಗುರುತುಪತ್ತೆ ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ : ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy