ಬೆಳಗಾವಿ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೊಡೋ ಪಾದಯಾತ್ರೆಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ತೆರಳಿದರು.
150ಕ್ಕೂ ಹೆಚ್ಚು ವಾಹನಗಳಲ್ಲಿ ಹೊರಟ ಕಾರ್ಯಕರ್ತರಿಗೆ ಚನ್ನರಾಜ ಹಟ್ಟಿಹೊಳಿ ಮಾರ್ಗದರ್ಶನ ಮಾಡಿ, ಕಾರ್ಯಕರ್ತರ ಜೊತೆಯೇ ತೆರಳಿದರು. ಎಲ್ಲರೂ ಸಂಜೆಯ ಹೊತ್ತಿಗೆ ಬಳ್ಳಾರಿಯಲ್ಲಿ ಪಾದಯಾತ್ರೆ ಸೇರಿಕೊಂಡರು.
ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದಿಂದಲೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮೀಣ ಕ್ಷೇತ್ರದ ಸಹಸ್ರಾರು ಕಾರ್ಯಕರ್ತರು ಸೇರಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


