ಬೆಂಗಳೂರು : ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


