ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯಲ್ಲಿ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೈಕ್ ಸವಾರ ವೆಂಕಟರಮಣಪ್ಪ (38)ವರ್ಷ ಕೊರಟಗೆರೆಯ ಬೈಪಾಸ್ ರಸ್ತೆಯಲ್ಲಿರುವ ನವೀನ್ ಬಾರ್&ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟರಮಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .
ಬೈಕ್ ಸವಾರ ಸಾವನ್ನಪ್ಪಿದ ಕೂಡಲೇ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಬಂದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ಕೊರಟಗೆರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವೆಂಕಟರಮಣಪ್ಪನವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy