ಕೊರಟಗೆರೆ: ತಾಲ್ಲೂಕಿನಲ್ಲಿ ತಡರಾತ್ರಿ ಸುರಿದ ಭಾrI ಮಳೆಯಿಂದ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೇಗೌಡನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಹೊಂಗೆ ಹಳ್ಳದಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಆಹಾರ ಅರಸಿ ಬಂದ ಕರಡಿ ಮರಿ ಹಳ್ಳ ದಾಟಲು ಸಾಧ್ಯವಾಗದೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳೆದ 3 ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಎಲ್ಲ ಹಳ್ಳ ಕೊಳ್ಳಗಳು ಕೆರೆಗಳು ತುಂಬಿ ಹರಿಯುತ್ತಿವೆ. ಹಳ್ಳದ ಹೆಚ್ಚಿನ ನೀರಿನ ರಭಸಕ್ಕೆ ಕೊಚ್ಚಿ ಹೋದ ಕರಡಿ ಮರಿ ದಾರುಣವಾಗಿ ಸಾವನ್ನಪ್ಪಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ “ಕರಡಿ 2 ವರ್ಷದ ಮರಿಯಾಗಿರುವುದರಿಂದ ಈಜು ಬರದೆ ಮುಳುಗಿ ಸಾವನ್ನಪ್ಪಿದೆ” ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ದೂರದ ಬೆಟ್ಟದಲ್ಲಿ ಕರಡಿ ಮರಿ ಮೃತ ದೇಹವನ್ನ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz