ಗುಬ್ಬಿ: ತಾಲೂಕಿನ ಕಡಬ ಹೋಬಳಿ ಕಲ್ಲೂರು ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ನಟರಾಜು ಹಾಗೂ ಹನುಮಂತು ನೀರುಪಾಲಾಗಿದ್ದರು. ಈ ಪೈಕಿ ಓರ್ವರ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳ ಭಾನುವಾರ ಪೂರ್ತಿ ಕೆರೆಯ ನೀರಿನಲ್ಲಿ ಹುಡುಕಿತ್ತು. ಆದರೆ ಇಂದು ಬೆಳಗ್ಗೆ 9 ಗಂಟೆಯ ವೇಳೆಗೆ ಬಿಳಿ ನಂದಿಯ ಬಳಿ ನಟರಾಜ್ ಅವರ ಶವ ಪತ್ತೆಯಾಗಿದೆ. ಆದರೆ ಹನುಮಂತು ಅವರ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಹನುಮಂತ ಅವರ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ನಿರಂತರ ಪ್ರಯತ್ನದಲ್ಲಿದೆ.
ವರದಿ: ಮಂಜುನಾಥ್ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz