ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ.
20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಸರಿಸುಮಾರು 9,000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz