ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಸಚಿವಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತು ಎಂದರು.
ಈ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಕೇಂದ್ರ ನಾಯಕರು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರಕ್ಕೆ ನಾನು ಬದ್ಧ. ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


