ಬೆಂಗಳೂರು: 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು, ಜೊತೆಗೆ ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


