ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಹೊಸದಾಗಿ 4 ಸಾವಿರ ಬಸ್ ಗಳನ್ನು ಖರೀದಿಸಲು ಮುಂದಾಗಿದೆ. ಇದೇ ವೇಳೆ ನಷ್ಟವನ್ನು ತಪ್ಪಿಸಲು ನಾಲ್ಕೂ ನಿಗಮಗಳನ್ನು ವಿಲೀನಗೊಳಿಸಲು ಸಜ್ಜಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳಿಂದ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟವನ್ನು ತಪ್ಪಿಸಲು ನಾಲ್ಕೂ ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಶ್ರೀನಿವಾಸಮೂರ್ತಿ ಸಮಿತಿ ಶಿಫಾರಸು ಮಾಡಿದೆ ಎಂದು ಹೇಳಿದರು.
ನಾಲ್ಕು ನಿಗಮಗಳು ಅಸ್ತಿತ್ವದಲ್ಲಿರುವುದರಿಂದ ಆಡಳಿತಾತ್ಮಕ ಹೊರೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ನಿಗಮಗಳನ್ನು ವಿಲೀನಗೊಳಿಸಿ ಒಂದೇ ನಿಗಮ ಅಸ್ತಿತ್ವದಲ್ಲಿರುವಂತೆ ಮಾಡಿದರೆ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟ ತಪ್ಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಲ್ಕು ನಿಗಮಗಳಿರುವುದರಿಂದ ಎಲ್ಲ ನಿಗಮಗಳು ತಮ್ಮ ತಮ್ಮ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳುತ್ತವೆ. ಹೀಗಾಗಿ ಬಹುತೇಕ ಸಂದರ್ಭಗಳಲ್ಲಿ ಬಸ್ಸುಗಳು ಕಡಿಮೆ ಪ್ರಯಾಣಿಕರೊಂದಿಗೆ ಸಂಚರಿಸುವಂತಾಗಿ ನಷ್ಟದ ಪ್ರಮಾಣ ಹೆಚ್ಚುತ್ತದೆ. ನಿಗಮಗಳು ವಿಲೀನವಾದಾಗ ಅಗತ್ಯಕ್ಕನುಗುಣವಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಬಹುದು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


