ನವೆಂಬರ್ 11 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಇಂದು ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ನವೆಂಬರ್ 7 ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ ಅಭಿಯಾನ ನಡೆಯಲಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೃತ್ತಿಕಾ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕೆಲವರು ಕೆಂಪೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರೇನು ಚಕ್ರವರ್ತಿನಾ ಅವರಿಗ್ಯಾಕೆ ಅಷ್ಟು ಮಹತ್ವ ಅಂತಾರೆ .
ಕೆಂಪೇಗೌಡರು ಎಷ್ಟು ದೊಡ್ಡವರು ಅನ್ನೋದು ಮುಖ್ಯ ಅಲ್ಲ. ಅವರು ಎಂತಹ ಕೆಲಸ ಮಾಡಿದ್ದಾರೆ ಅನ್ನೋದು ಮುಖ್ಯ. ಕೆಂಪೇಗೌಡರಿಂದ ಈ ಬೆಂಗಳೂರು ಸೃಷ್ಠಿಯಾಗಿರುವುದು. ಹಲವು ಸರ್ಕಾರ ಬಂದು ಹೋದರೂ ಕೆಂಪೇಗೌಡರಿಗೆ ಗೌರವ ಸಿಕ್ಕಿಲ್ಲ. ಬಿಎಸ್ ವೈ ಮತ್ತು ಸಿಎಂ ಬೊಮ್ಮಾಯಿ ಕೆಂಪೇಗೌಡರಿಗೆ ಗೌರವ ಸೂಚಿಸಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


