ಗುರುರಾಯರ ಸನ್ನಿಧಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿಗೆ ಹಣದ ಹರಿವು ಹರಿದು ಬಂದಿದ್ದು, ಸುಮಾರು ಒಂದು ತಿಂಗಳಲ್ಲಿ ಸುಮಾರು 2 ಕೋಟಿ ರೂ. ಸಂಗ್ರಹವಾಗಿ ದಾಖಲೆ ಬರೆದಿದೆ.
ಅಕ್ಟೋಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 1,98,17,614 ರೂ. ಸಂಗ್ರಹವಾಗಿದೆ. ಸಂಗ್ರಹವಾದ ಕಾಣಿಕೆಯಲ್ಲಿ 4,40,660 ರೂ. ನಾಣ್ಯಗಳು ಹಾಗೂ 1,93,77,054 ರೂ. ನೋಟುಗಳಿವೆ. ಜೊತೆಗೆ 128 ಗ್ರಾಂ ಬಂಗಾರ, 810 ಗ್ರಾಂ ಬೆಳ್ಳಿ ವಸ್ತುಗಳು ಸಿಕ್ಕಿವೆ.
ಸೆಪ್ಟೆಂಬರ್ 29ರಿಂದ ಅಕ್ಟೋಬರ್ 18ರವರೆಗಿನ 20 ದಿನಗಳ ಕಾಣಿಕೆ ಸಂಗ್ರವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.
ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಮಠಕ್ಕೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ, ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಎಣಿಕೆ ಕಾರ್ಯ ಮುಕ್ತಾಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy