ಬೆಂಗಳೂರು : ಬರೋಬ್ಬರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕಟಿತ ವರ್ಗಾವಣೆ ಆದೇಶದಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದೆ.
ಡಾ.ಪ್ರಸಾದ್ ಎನ್ ವಿ ಅವರಿಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದ್ದರೇ, ಜಯರಾಂ ಅವರಿಗೆ ಕಪಿಲ್ ಮೋಹನ್ ಅವರ ವರ್ಗಾವಣೆಯಿಂದ ತೆರವಾದಂತ ಕಂದಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೊಣೆಗಾರಿಕೆ ನೀಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಅನಿಲ್ ಕುಮಾರ್ ಟಿ.ಕೆ ಅವರಿಗೆ ರೆವಿನ್ಯೂ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಸ್ಕಿಲ್ ಡೆವೆಲೆಪ್ ಮೆಂಟ್, ಎಂಟರ್ ಪ್ರೈನೆರ್ ಶಿಪ್ ಮತ್ತು ಲೈವಿಹೂಡ್ ನ ಹೆಚ್ಚುವರಿ ಕಾರ್ಯದರ್ಶಿ ಶ್ರೀವಿದ್ಯಾ ಪಿ.ಐ ಅವರನ್ನು ಬೆಂಗಳೂರು ಈ-ಗೋವೆರೆನ್ಸ್ ನ ಸಿಇಓ ಆಗಿ ನೇಮಕ ಮಾಡಿದೆ.
ಮೈಸೂರು ಡಿಸಿ ಡಾ.ಬೋಗಾದಿ ಗೌತಮ್ಮ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರಿನ ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ಡೈರೆಕ್ಟರ್ ಆಗಿ ನೇಮಿಸಿದೆ.
ರಮೇಶ್ ಡಿ ಎಸ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಶ್ರೀಮತಿ ಅಶ್ವತ್ಥಿ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಮಂಡ್ಯ ನೂತನ ಡಿಸಿಯಾಗಿ ಡಾ.ಗೋಪಾಲ್ ಕೃಷ್ಣ ಹೆಚ್ ಎನ್ ನೇಮಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


