ಬೆಂಗಳೂರು : ವಿಧಾನಭೆಯ ಉಪ ಸಭಾಪತಿ, ಸವದತ್ತಿ ಮತ ಕ್ಷೇತ್ರದ ಶಾಸಕ ಆನಂದ್ ಮಾಮನಿ(56) ಇಂದು ರಾತ್ರಿ12 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಈ ಮೊದಲು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನ ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಂಬುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನ ಸವದತ್ತಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಅಂತ ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


