nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನುವಾರುಗಳಿಗೆ ಚರ್ಮ ಗಂಟು ರೋಗ |  ಅತಿಯಾದ ಮಳೆಯಿಂದ ರೈತ ಸಂತ್ರಸ್ತರ ಬದುಕು ಬರಡು..
    ಕೊರಟಗೆರೆ October 24, 2022

    ಜಾನುವಾರುಗಳಿಗೆ ಚರ್ಮ ಗಂಟು ರೋಗ |  ಅತಿಯಾದ ಮಳೆಯಿಂದ ರೈತ ಸಂತ್ರಸ್ತರ ಬದುಕು ಬರಡು..

    By adminOctober 24, 2022No Comments2 Mins Read
    ganturoga

    ಕೊರಟಗೆರೆ: ಒಂದೆಡೆ ಮಳೆ ಆರ್ಭಟದಿಂದ ಬೆಳೆ ನಷ್ಟ ಮತ್ತು ಮೇವಿನ ತೊಂದರೆ ಅನುಭವಿಸುತ್ತಿರುವ ತಾಲ್ಲೂಕಿನ ರೈತರಿಗೆ ಗಾಯದ ಮೇಲೆ ಬರೆ ಎಂಬಂತೆ ಜೀವನಾಡಿ ರಾಸುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ರಾಸುಗಳಿಗೆ ಚರ್ಮಗಂಟು ರೋಗ  ಕಾಣಿಸಿಕೊಂಡಿರುವುದು ತಾಲ್ಲೂಕಿನ ರೈತಾಪಿ ವರ್ಗಕ್ಕೆ ಮತ್ತೊಂದು ಆಘಾತವಾಗಿದೆ.

    ಕೊರಟಗೆರೆ ಪಶುಪಾಲನಾ ಇಲಾಖೆಯ ಮಾಹಿತಿಯಂತೆ ಅ-22 ರ ದೈನಂದಿನ ಮಾಹಿತಿ ಪ್ರಕಾರ ರೋಗ ಕಂಡುಬಂದ ಗ್ರಾಮಗಳ ಒಟ್ಟು ಸಂಖ್ಯೆ 51, ರೋಗಕ್ಕೆ ತುತ್ತಾದ ಜಾನುವಾರುಗಳ ಸಂಖ್ಯೆ 100, ಚಿಕಿತ್ಸೆಯಿಂದ ಗುಣಮುಖ ಹೊಂದಿದ ಜಾನುವಾರುಗಳ ಸಂಖ್ಯೆ 26, ರೋಗದಿಂದ ಮರಣ ಹೊಂದಿದ ಜಾನುವಾರುಗಳ ಸಂಖ್ಯೆ 4 , ಇದುವರೆಗೆ IAH  ಹಾಗೂ VB ಯಿಂದ ಸರಬರಾಜಾದ ಲಸಿಕೆ ಪ್ರಮಾಣ ಸಂಖ್ಯೆ  ( ಡೋಸ್ ) 7.000 , ಲಸಿಕೆ ಹಾಕಿದ ಜಾನುವಾರುಗಳ ಸಂಖ್ಯೆ 5899  ಆಗಿದೆ .ಎಂದು ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ.ಸಿದ್ದನಗೌಡ ಮಾಹಿತಿ ನೀಡಿದ್ದಾರೆ.

     ರೋಗದ ಲಕ್ಷಣಗಳು ಕಂಡುಬರುವುದು ಹೇಗೆ?

    ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು , ನಿಶಕ್ತಿ , ಕಾಲುಗಳಲ್ಲಿ ಬಾವು ಮತ್ತು ಕುಂಟುವುದು, ಜಾನುವಾರುಗಳ ಚರ್ಮದ ಮೇಲೆ 2-5 ಸೆ.ಮಿ ನಷ್ಟು ಅಗಲವಿರುವ ಗಂಟು ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ, ಜರ್ಸಿ , ಹೆಚ್ ಎಫ್ ,ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ.

    ರೋಗ ಹರಡುವುದು ಹೇಗೆ?

    ಸೊಳ್ಳೆ, ಉಣ್ಣೆ, ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ ,ಕಲುಷಿತಗೊಂಡ ನೀರು ಹಾಗೂ ಆಹಾರದಿಂದ ,ಜಾನುವಾರುಗಳ ನೇರ ಸಂಪರ್ಕದಿಂದ ,ರೋಗ ಹರಡುವಿಕೆ ಪ್ರಮಾಣ ಶೇ.10- 20 ರಷ್ಟು ಹಾಗೂ ರೋಗದ ಸಾವಿನ ಪ್ರಮಾಣ 1-5 ರಷ್ಟು ಇರುತ್ತದೆ.

    ಈ ರೋಗಕ್ಕೆ ಚಿಕಿತ್ಸೆ ಹಾಗೂ ತಡೆಗಟ್ಟುವುದು ಹೇಗೆ?

    ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ , ಜಾನುವಾರುಗಳಿಗೆ ರೋಗದ ಲಕ್ಷಣಗಳಿಗೆ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು, ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಸಿಯಂ ಪರಮ್ಯಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ . ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸಬೇಕು , ರೋಗ ಹರಡುವುದನ್ನು ತಡೆಯಲು ರೋಗಗ್ರಸ್ತ ಜಾನುವಾರುಗಳನ್ನು ಬೇರ್ಪಡಿಸಬೇಕು. ರೋಗಗ್ರಸ್ತ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಚಗೊಳಿಸಬೇಕು, ಹಸಿರು ಮೇವು, ಪೌಷ್ಟಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 6 ಬಾರಿ ಕುಡಿಸಬೇಕು, ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು, ರೋಗಗ್ರಸ್ತ ಜಾನುವಾರು ಮರಣ ಹೊಂದಿದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು.

    ಚರ್ಮಗಂಟು ರೋಗ ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಕ್ಯಾಪ್ರಿಫಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ , ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ ,ನೊಣ , ಉಣ್ಣೆ ) ಬಹುಬೇಗ ಹರಡುತ್ತದೆ , ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ..

    ಡಾ.ಸಿದ್ದನಗೌಡ , ಪಶು ಇಲಾಖೆಯ ಸಹಾಯಕ ನಿರ್ದೇಶಕರು, ಕೊರಟಗೆರೆ.

     

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.