ವಿಜಯನಗರ: ನಗರಸಭೆ, ಗ್ರಾಮ ಪಂಚಾಯ್ತಿ ಸದಸ್ಯರಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ದೀಪಾವಳಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಬೆಳ್ಳಿ, ನಗದು, ರೇಷ್ಮೆ ಸೀರೆ ಮತ್ತು ಪಂಚೆಯನ್ನು ಉಡುಗೋರೆಯಾಗಿ ನೀಡಿದ್ದಾರೆ.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತನ್ನ ಕ್ಷೇತ್ರದ ನಗರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತು 182 ಗ್ರಾಮ ಪಂಚಾಯ್ತಿ ಸದಸ್ಯರಿಗೆ ಬೆಳ್ಳಿ, ನಗದು, ರೇಷ್ಣೆ ಸೀರೆ, ಪಂಚೆ ನೀಡಿ, ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆಗೆ ಆಹ್ವಾನಿಸಿದ್ದಾರೆ.
ನಗರಸಭೆ, ಪಟ್ಟಣ ಪಂಚಾಯ್ತಿ ಸದಸ್ಯರಿಗೆ ತಲಾ 1 ಲಕ್ಷದ 44 ಸಾವಿರ ರೂ ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಣೆ ಸೀತಿ, ಪಂಚೆ, ಅಂಗಿ, ಮುತ್ತಿನ ಹಾರ ಹಾಗೂ ಡ್ರೈ ಪ್ರೂಟ್ಸ್ ನೀಡಿದ್ದಾರೆ.
ಇನ್ನೂ 182 ಗ್ರಾಮ ಪಂಚಾಯ್ತಿ ಸದಸ್ಯರಿಗೆ ಅರ್ಧ ಕೆಜಿ ಬೆಳ್ಳಿ, 27 ಸಾವಿರ ನಗದು, ರೇಷ್ಮೆ ಸೀರೆ, ಪಂಚೆ, ರೇಷ್ಮೆ ಶರ್ಟ್, ಮುತ್ತಿನ ಹಾರ ಮತ್ತು ಡ್ರೈ ಪ್ರೂಟ್ಸ್ ನೀಡಿ, ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆಗೆ ಆಮಂತ್ರಣ ನೀಡಿದ್ದಾರೆ.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ತನ್ನ ಕ್ಷೇತ್ರದ ಜನಪ್ರತಿನಿಧಿಗಳಿಗೆ ನೀಡಿರುವಂತ ದೀಪಾವಳಿ ಗಿಫ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


