ದಾವಣಗೆರೆ : ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಡಿಜಿಪಿಯಂತಹ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಹೇಗೆ ಪ್ರಶ್ನಿಸುತ್ತಾರೆ. ಸಿಐಡಿಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂಬ ವಿಶ್ವಾಸ ನಮಗೆ ಇಲ್ಲ ಎಂದಿದ್ದಾರೆ.
ಇನ್ನು ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಸತಿ ಸಚಿವ ವಿ.ಸೋಮಣ್ಣ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಸಚಿವರಾಗಲು ನಾಲಾಯಕ್, ಜನರ ಸಂಕಷ್ಟ, ಸಮಸ್ಯೆಗಳಿಗೆ ಸ್ಪಂದಿಸುವ ತಾಳ್ಮೆ, ಸಹನೆ ಇರದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


