ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಮಾಜಿ ಡಿಸಿಎಂ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ತನ್ನ ಸ್ವಕ್ಷೇತ್ರವಾದ ಕೊರಟಗೆರೆಯ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆಯ ನಮ್ಮೂರ ಹಬ್ಬವೆಂಬ ಕಾರ್ಯಕ್ರಮದಲ್ಲಿ ತಮ್ಮ ರಾಜಕೀಯ ಭವಿಷ್ಯದ ಮನದಾಸೆಯನ್ನು ಸಾರ್ವಜನಿಕವಾಗಿ ಬಿಚ್ಚಿಟ್ಟಿದ್ದಾರೆ.
ಕೊರಟಗೆರೆ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನು ನಮ್ಮೂರ ಹಬ್ಬದ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡುತ್ತಾ, ತಮ್ಮ ಮನದಾಳದ ಮಾತು ಬಿಚ್ಚಿಟ್ಟ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಈ ಕ್ಷೇತ್ರದ ಜನತೆ ನನ್ನನ್ನ ಎರಡು ಬಾರೀ ಆಯ್ಕೆ ಮಾಡಿದ್ದಾರೆ. ಆದ್ರೆ ಒಳ್ಳೆ ಟೈಂ ನಲ್ಲಿ ನನ್ನ ಪಲ್ಟಿ ಒಡೆಸಿದ್ದಾರೆ. 2013 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದಿದ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗೋ ಅವಕಾಶ ಇತ್ತು ಎಂದರು.
ನನ್ನದು ಹಣೆಬರಹ ಇರಬೇಕಲ್ಲಾ, ಬರೇ ನಿಮ್ಮದೇ ಹೇಳಿದ್ರೆ ನಾನು ಏನು ಹೇಳಲಿ. ಹಣೆ ಬರಹ ಬಹುಶಃ ನನಗಿರಲಿಲ್ಲ ಅಂತಾ ಕಾಣಿಸುತ್ತೆ. ಆಗಾಗಿ ಇವತ್ತು ನನ್ನ ಕೈಲಾದ ಕೆಲಸ ಮಾಡಿದ್ದೇನೆ ಅನ್ನೋ ಆತ್ಮತೃಪ್ತಿ ನನಗಿದೆ. ತಮಗೆ ಇದೆಯೋ ಇಲ್ವೋ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದರು.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


