ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೂಸು ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್. ನ್ಯಾ. ನಾಗಮೋಹನ್ ದಾಸ್ ಸಮಿತಿ ಮಾಡಿದ್ದಕ್ಕೆ ಯಶಸ್ಸು ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಭಯಕೆ ನ್ಯಾಯ ಒದಗಿಸಬೇಕು ಅನ್ನೋದು. ಎಸ್ ಟಿ ಸಮುದಾಯದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ. ಇಲ್ಲದಿದ್ರೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಹೆಚ್ಚಿಸುತ್ತಿದ್ದರು. ಬರೀ ಪೆಫರ್ ನಲ್ಲಿ ಚಾಕಲೇಟ್ ಇಟ್ಟು ಕೊಡಲು ಹೋಗಬೇಡಿ. ಬಿಜೆಪಿ ತೀರ್ಮಾನ ಕೇವಲ ಕಣ್ಣೊರೆಸೋ ತಂತ್ರವಷ್ಟೆ ಎಂದು ಟೀಕಿಸಿದರು.
ಭಾರತ್ ಜೋಡೋ ಯಾತ್ರೆಗೆ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಬಸ್ ಯಾತ್ರೆ ಬಗ್ಗೆ ನಾನೋಬ್ಬನೆ ನಿರ್ಧಾರ ಮಾಡಲು ಆಗಲ್ಲ. ಎಲ್ಲಾ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಮಾಡಬೇಕು. ಎಲ್ಲರ ಜತೆ ಚರ್ಚಿಸಿ ಬಸ್ ಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಾಮೂಹಿಕ ನಾಯಕತ್ವದಲ್ಲಿ ಮತ್ತೊಂದು ಯಾತ್ರೆ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


