ವಿಜಯಪುರ: ಟ್ರ್ಯಾಕ್ಟರಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ಮೃತಪಟ್ಟು, 9 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಇಂಡಿ ತಾಲೂಕಿನ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಭಯ್ಯಾಜಿ ಶಿಂಧೆ(50), ಸುಮಿತ್ರಾ ಶಿಂಧೆ(45) ಮೃತ ದುರ್ದೈವಿಗಳು. ಮೃತ ದಂಪತಿ ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ನಿವಾಸಿಗಳು.
ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರಗೆ ಮಹಾರಾಷ್ಟ್ರದ ಅಕ್ಕಲಕೋಟಗೆ ತೆರಳುತ್ತಿದ್ದ ಕ್ರೂಸರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ 9 ಜನರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಥಣಿ ಮೂಲದ ಇವರೆಲ್ಲಾ ಕ್ರೂಸರ್ ನಲ್ಲಿ ಅಕ್ಕಲಕೋಟೆ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


