ತಿಪಟೂರು: ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆಗಾಗಿ ರಾಜ್ಯಾದ್ಯಂತ ಎಲ್ಲಾ ಗ್ರಾಮಗಳಿಂದಲು ಮೃತ್ತಿಕೆ ಸಂಗ್ರಹ ಕಾರ್ಯನಡೆಯುತ್ತಿದೆ. ಇದೇ ವೇಳೆ ಬಿಜೆಪಿಯು ಈ ಕಾರ್ಯಕ್ರಮದಲ್ಲಿಯೂ ರಾಜಕೀಯ ಲಾಭ ಮಾಡಲು ಹೊರಟಿದೆ ಎಂದು ಆರೋಪಿಸಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಚಿಕ್ಕಹೊನ್ನವಳ್ಳಿ ಗ್ರಾಮದಲ್ಲಿ ರಥವನ್ನು ತಡೆದ ಸಾರ್ವಜನಿಕರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗ್ರಾಮದೊಳಗೆ ಬರದಂತೆ ತಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲ್ಲೂಕಿನಾದ್ಯಂತ ಸೂಸೂತ್ರವಾಗಿ ನಡೆಯುತ್ತಿದ್ದ ಮೃತಿಕೆ ಸಂಗ್ರಹವು ಸಚಿವರ ಉಪಸ್ಥಿತಿಯಲ್ಲಿಯೇ ಜರುಗುತ್ತಿತ್ತು. ಆದರೆ ಚಿಕ್ಕಹೊನ್ನವಳ್ಳಿ ಗ್ರಾಮದಲ್ಲಿ ಈ ರಥಯಾತ್ರೆಯಲ್ಲಿ ಒಕ್ಕಲಿಗರ ಸ್ವಾಮೀಜಿಗಳಾದ ಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು, ಶ್ರೀಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಯಾಕೆ ಇಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಇನ್ನೂ ಮಾಜಿ ಸಿಎಂ ಯಡಿಯೂರಪ್ಪನವರ ಚಿತ್ರವನ್ನು ಬಳಸಿ ಅದರಲ್ಲಿ ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ, ಒಕ್ಕಲಿಗರ ನಾಯಕರು, ಹಿರಿಯರೂ, ಮಾಜಿ ಪ್ರಧಾನಿಗಳೂ ಆಗಿರುವ ದೇವೇಗೌಡರ ಚಿತ್ರವನ್ನು ಯಾಕೆ ಬಳಸಿಲ್ಲ? ಎಂದು ಪ್ರಶ್ನಿಸಿದರು.
ಕೆಂಪೇಗೌಡರ ಪ್ರತಿಮೆ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಚಿತ್ರ ಯಾಕೆ? ಕರ್ನಾಟಕದಲ್ಲೇ ಇರುವ ಮಾಜಿ ಪ್ರಧಾನಿಗಳ ಚಿತ್ರ ಯಾಕೆ ಹಾಕಿಲ್ಲ. ಈ ಕಾರ್ಯಕ್ರಮವನ್ನು ಬಿಜೆಪಿ ರಾಜಕೀಯಕ್ಕೆ ಬಳಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಈ ವಿಚಾರವು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಕೊನೆಗೆ ಹಿರಿಯರು ಮಧ್ಯಸ್ಥಿಕೆ ವಹಿಸಿ ಆಕ್ರೋಶಿತರನ್ನು ಸಮಾಧಾನಪಡಿಸಿದ್ದಾರೆ. ಬಳಿಕ ಮೃತಿಕೆ ಸಂಗ್ರಹದ ಕಾರ್ಯಕ್ರಮ ಮುಂದುವರಿದಿದೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz