nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    September 24, 2026
    Facebook Twitter Instagram
    ಟ್ರೆಂಡಿಂಗ್
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    • ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರುನಾಡ ವಿಜಯ ಸೇನೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ: ಆಹ್ವಾನ ಪತ್ರಿಕೆ, ಬಿತ್ತಿ ಚಿತ್ರ ಬಿಡುಗಡೆ
    ತುರುವೇಕೆರೆ October 30, 2022

    ಕರುನಾಡ ವಿಜಯ ಸೇನೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ: ಆಹ್ವಾನ ಪತ್ರಿಕೆ, ಬಿತ್ತಿ ಚಿತ್ರ ಬಿಡುಗಡೆ

    By adminOctober 30, 2022No Comments2 Mins Read
    karunada vijaya sene

    ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕರುನಾಡ ವಿಜಯ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಅಧ್ಯಕ್ಷರಾದ ಎಚ್.ಎಸ್. ಸುರೇಶ್ ಅಧ್ಯಕ್ಷತೆಯಲ್ಲಿ ಆಹ್ವಾನ ಪತ್ರಿಕೆ ಬಿತ್ತಿ ಚಿತ್ರ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಿಂದ ಏರ್ಪಡಿಸಲಾಗಿತ್ತು.

    ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎಸ್.ಸುರೇಶ್, ನವೆಂಬರ್ 28 2022ನೇ ಸೋಮವಾರ ಪಟ್ಟಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಸಂಘಟನೆಯ ವತಿಯಿಂದ ನಡೆಸಲಾಗುವುದು ಎಂದು ತಿಳಿಸಿದರು.

    ಧ್ವಜಾರೋಹಣವನ್ನು ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಾಲ್ ಎನ್. ನಾಯಕ್ , ಹಾಗೂ ಪೊಲೀಸ್ ಉಪನಿರೀಕ್ಷಕರಾದ ಕೇಶವಮೂರ್ತಿ  ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರುನಾಡ ವಿಜಯ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹೆಚ್. ಎನ್. ದೀಪಕ್ ವಹಿಸಲಿದ್ದಾರೆ., ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಮಸಾಲ ಜಯರಾಮ್ ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.

    ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 28.11.2022ನೇ ಸೋಮವಾರದಂದು ಉಚಿತ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ನಮ್ಮ ತಾಲೂಕಿನ ಅತಿ ಕಿರಿಯ ವಯಸ್ಸಿನಲ್ಲಿಯೇ ತನ್ನ ಅಂಗಾಂಗಗಳನ್ನು ದಾನ ಮಾಡಿ ಇಂದಿನ ಯುವ ಪೀಳಿಗೆಗೆ ಸ್ಪೂರ್ತಿಯಾದ ದಿವಂಗತ ದರ್ಶನ್ ನರಿಗೆಹಳ್ಳಿ ಇವರ ತಂದೆ ತಾಯಿಗಳಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ  ಎಂದು ಸುರೇಶ್ ತಿಳಿಸಿದರು.

    ಉಚಿತ ಆರೋಗ್ಯ ತಪಾಸಣಾ ಮೇಳವನ್ನೂ ಹಮ್ಮಿಕೊಳ್ಳಲಾಗಿದ್ದು,   ಇದರ ಅಧ್ಯಕ್ಷತೆಯನ್ನು ತಾಲೂಕಿನ ದಂಡಾಧಿಕಾರಿಗಳಾದ ವೈ.ಎಂ.ರೇಣು ಕುಮಾರ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸುಪ್ರೀತಾ ಉದ್ಘಾಟಿಸಲಿದ್ದಾರೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಹರಿಪ್ರಸಾದ್ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಪದ್ಮನಾಭ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದರು.

    ಈ ಸಭೆಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಕೃಷ್ಣಮೂರ್ತಿ (ಕಿಟ್ಟಿ), ಕಾರ್ಯಾಧ್ಯಕ್ಷ ನಂದೀಶ್, ಗವಿ ರಂಗಪ್ಪ, ಗಿರೀಶ್, ಎಸ್ ಸಿ / ಎಸ್ ಟಿ ತಾಲೂಕು ಘಟಕದ ಅಧ್ಯಕ್ಷರಾದ ಬಿಗನಹಳ್ಳಿ ಪುಟ್ಟರಾಜು, ಅಲ್ಪಸಂಖ್ಯಾತರ ಘಟಕದ ಶಫಿ, ಮಹಿಳಾ ಘಟಕದ ಲಲಿತಾ ಹಾಗೂ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಬೆಂಗಳೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪ್ರದರ್ಶನಗೊಳ್ಳುವ ಜಿಲ್ಲಾ ಸ್ತಬ್ಧಚಿತ್ರಗಳ (Tableaux) ಸಂಖ್ಯೆಯನ್ನು ರಾಜ್ಯ ಸರ್ಕಾರ ಕೇವಲ…

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    September 24, 2026

    ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.