ಬೆಂಗಳೂರು : ಶೀಘ್ರದಲ್ಲೇ ಕೆಎಸ್ಆರ್‌ಟಿಸಿ ನೌಕರರಿಗೆ ಆರನೇ ವೇತನ ಆಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಆಗಬೇಕು, ಆದರೆ ಬೇರೆ ಬೇರೆ ಕಾರಣಗಳಿಂದ ಇದು ಸಾಧ್ಯವಾಗಿಲ್ಲ, ಆದ್ದರಿಂದ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲೇ ಸಿಹಿಸುದ್ದಿ ನೀಡುವುದಾಗಿ ಹೇಳಿದ್ದಾರೆ.
ಇನ್ನು ಕೆಎಸ್‌ಆರ್‌ಟಿಸಿ ನೌಕರರಿಗೆ ಪ್ರತಿ ತಿಂಗಳ ಒಂದನೇ ತಾರೀಖಿನಂದೇ ವೇತನ ನೀಡುವ ಬಗ್ಗೆ ಮಹತ್ವದ ತೀರ್ಮಾನಕ್ಕೆ ನಿರ್ಧರಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿಸುದ್ದಿ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


