nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ:  56 ಅಡಿ ಎತ್ತರದ ಕನ್ನಡ ಧ್ವಜಸ್ತಂಭ ಲೋಕಾರ್ಪಣೆ: ಪಟ್ಟಣದಲ್ಲಿ ಹಬ್ಬದ ಸಡಗರ
    ಕೊರಟಗೆರೆ November 2, 2022

    ಕೊರಟಗೆರೆ:  56 ಅಡಿ ಎತ್ತರದ ಕನ್ನಡ ಧ್ವಜಸ್ತಂಭ ಲೋಕಾರ್ಪಣೆ: ಪಟ್ಟಣದಲ್ಲಿ ಹಬ್ಬದ ಸಡಗರ

    By adminNovember 2, 2022No Comments2 Mins Read
    kannada flag

    Provided by
    Provided by

    ಕೊರಟಗೆರೆ: ಕರ್ನಾಟಕದ ಕನ್ನಡಿಗರಿಗೆ ನವಂಬರ್-1 ಹೆಮ್ಮೆಯ ದಿನವಾಗಿದೆ. ಕರ್ನಾಟಕದ ಪ್ರತಿ ಮನೆಯಲ್ಲಿ ಇಂದು ಹಬ್ಬದ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ಮಾಡಿದ್ದಾರೆ. ರಾಜ್ಯ ಸರಕಾರದ ಕೋಟಿಕಂಠ ಗಾಯನ ಎನ್ನುವ ವಿಶಿಷ್ಟ ಕಾರ್ಯಕ್ರಮವು ಕನ್ನಡಿಗರ ಗಮನ ಸೆಳೆದಿದೆ ಎಂದು ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಹೇಳಿದರು.

    ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೊರಟಗೆರೆ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕರ್ನಾಟಕ ರಾಜ್ಯವು ಹತ್ತಾರು ವಿಸ್ಮಯ ಪ್ರಕೃತಿಯನ್ನು ಒಳಗೊಂಡಿದೆ. ನಮ್ಮ ನಾಡು ಶ್ರೀಗಂಧದ ಬೀಡು. ಹಚ್ಚಹಸುರಿನ ಸುಂದರ ಬೆಟ್ಟಗುಡ್ಡಗಳ ಗೂಡು, ಪವಿತ್ರ ಕಾವೇರಿ, ತುಂಗಾಭದ್ರೆ ನದಿಗಳು ಹರಿಯುವ, ಸಾಧುಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಈ ನಾಡಿಗೆ ಎಂದು ಹೇಳಿದರು.

    ಕೊರಟಗೆರೆ ಪಪಂ ಅಧ್ಯಕ್ಷೆ ಕಾವ್ಯ ರಮೇಶ್ ಮಾತನಾಡಿ, ಆಲೂರು ವೆಂಕಟರಾವ್ 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿ.  1950ರಲ್ಲಿ ಭಾರತ ದೇಶವು ಗಣರಾಜ್ಯವಾದ ನಂತರ ನಿರ್ದೀಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳ ರಚನೆಯಾಗಿದೆ. ಈ ತರ್ಕಕ್ಕೆ ಅನುಗುಣವಾಗಿ 1973ರ ನ.1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಕರ್ನಾಟಕ ಎಂದು ಬದಲಾವಣೆ ಮಾಡಿದ್ದಾರೆ ಎಂದು ತಿಳಿಸಿದರು.


    Provided by
    Provided by

    ವಿವಿಧ ಕ್ಷೇತ್ರದ 16 ಸಾಧಕರಿಗೆ ಸನ್ಮಾನ:

    ಕೃಷಿ ಕ್ಷೇತ್ರದಿಂದ ಬರಕ ಗ್ರಾಮದ ರೈತ ದೊಡ್ಡಯ್ಯ, ಚಿಕ್ಕನಹಳ್ಳಿಯ ಶಿವಣ್ಣ, ಮಾದ್ಯಮ ಕ್ಷೇತ್ರದಿಂದ ಸಿದ್ದರಾಜು.ಕೆ, ನಾಗೇಂದ್ರ.ಟಿ.ಸಿ, ಸರಕಾರಿ ನೌಕರ ಕ್ಷೇತ್ರದಿಂದ ಬುಕ್ಕಾಪಟ್ಟಣ ಕಾಂತರಾಜು, ಕನ್ನಡಪರ ಹೋರಾಟ ಕ್ಷೇತ್ರದಿಂದ ಪ್ರಸನ್ನಕುಮಾರ್, ಖಲೀಂವುಲ್ಲಾ, ಕ್ರೀಡಾ ಕ್ಷೇತ್ರದಿಂದ ವಿಜಯಲಕ್ಷ್ಮೀ, ರಾಮಚಂದ್ರಶರ್ಮ, ಸಾಹಿತ್ಯ ಕ್ಷೇತ್ರದಿಂದ ಮಧುಸೂಧನ, ತಿಮ್ಮರಾಜು, ಸಮಾಜಸೇವೆಯಿಂದ ರಮೇಶ್, ರಂಗಭೂಮಿ ವೆಂಕಟಪ್ಪ, ಮಾವತ್ತೂರು ಜಯಶ್ರೀ, ರವಿಕುಮಾರ್, ನರೇಂದ್ರರವರನ್ನು ಕೊರಟಗೆರೆ ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

    56 ಅಡಿಯ ಕನ್ನಡ ಧ್ವಜಸ್ತಂಭ ಲೋಕಾರ್ಪಣೆ:

    ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ,  ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‍ಶೆಟ್ಟಿ), ಕನ್ನಡ ಪ್ರತಿಷ್ಠಾನ(ರಿ) ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕೊರಟಗೆರೆ ಪಟ್ಟಣದ ಸರಕಾರಿ ಬಸ್ ನಿಲ್ದಾಣದ ಮುಂಭಾಗ ನಿರ್ಮಾಣ ಮಾಡಿರುವ 56ಅಡಿ ಎತ್ತರದ ಕನ್ನಡ ಧ್ವಜಸ್ತಂಭವನ್ನು ಪಪಂ ಅಧ್ಯಕ್ಷೆ ಕಾವ್ಯ ರಮೇಶ್, ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ದೇವರಾಜು ಕೆ.ಎನ್.,  ಕರವೇ ಅಧ್ಯಕ್ಷ ಕೆ.ಎನ್.ನಟರಾಜ್, ಮಂಜು ಸ್ವಾಮಿ ಎಂ.ಎನ್., ಹರೀಶ್.ಬಿ.ಸಿ, ಡಾ.ಡಿ.ವೆಂಕಟೇಶ್ ಲೋಕಾರ್ಪಣೆ ಮಾಡಿ 7 ಅಡಿ ಅಗಲ 13ಅಡಿ ಉದ್ದದ ಕನ್ನಡ ಬಾವುಟವನ್ನು ಆಕಾಶದ ಎತ್ತರಕ್ಕೆ ಆರಿಸುವ ಮೂಲಕ ನೂರಾರು ಕನ್ನಡಪರ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

    ಪ್ರಕೃತಿಯ ಮಡಿಲಲ್ಲಿ ಕನ್ನಡ ರಾಜ್ಯೋತ್ಸವ:

    ಕೊರಟಗೆರೆ ಪಟ್ಟಣದ ಗಂಗಾಧರೇಶ್ವರ ಸ್ವಾಮಿಯ ಬೆಟ್ಟದ ಪ್ರಕೃತಿಯ ಮಡಿಲಿನಲ್ಲಿ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್, ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ ಮತ್ತು ಪಪಂ ಸದಸ್ಯರ ನೇತೃತ್ವದಲ್ಲಿ ನೂರಾರು ಜನ ಕನ್ನಡಪರ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರು ಜೊತೆಗೂಡಿ ಧ್ವಜಸ್ತಂಭ ಪ್ರತಿಷ್ಟಾಪನೆ ಮಾಡುವುದರ ಜೊತೆಯಲ್ಲಿ ಕನ್ನಡ ಬಾವುಟವನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಪ.ಪಂ. ಉಪಾಧ್ಯಕ್ಷೆ ಭಾರತಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎನ್.ನಟರಾಜ್, ಸದಸ್ಯರಾದ ಬಲರಾಮಯ್ಯ, ಹುಸ್ನಾಫಾರಿಯಾ, ತಾಪಂ ಇಓ ಡಾ.ಡಿ.ದೊಡ್ಡಸಿದ್ದಯ್ಯ, ಬಿಇಓ ಸುಧಾಕರ್, ಪಪಂ ಮುಖ್ಯಾಧಿಕಾರಿ ಭಾಗ್ಯಮ್ಮ, ಸಿಡಿಪಿಓ ಅಂಬಿಕಾ, ಅಬಕಾರಿ ಇಲಾಖೆಯ ಶ್ರೀಲತಾ, ಅರಣ್ಯ ಇಲಾಖೆಯ ಸುರೇಶ್, ಸಿಪಿಐ ಸುರೇಶ್.ಕೆ, ಪಿಎಸೈ ಚೇತನ್ ಸೇರಿದಂತೆ ಇತರರು ಇದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.