ಬೆಳಗಾವಿ: 132 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಕೋಹಳಿ ಗ್ರಾಮದ ರವಿ ಶಿಂಗೆ, ಉಗಾರ ಬಿ.ಕೆ ಗ್ರಾಮದ ಮಹಾದೇವ ಕಾಂಬಳೆ, ಕಮರಿ ಗ್ರಾಮದ ಪ್ರದೀವ್ ಕರಡಿ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ ಸೇರಿದಂತೆ 12 ಮಂದಿ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಈ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. 132 ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಆರೋಪಿಗಳನ್ನು ಗಡಿಪಾರು ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡುವಂತ ಕೆಲಸ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


