ಹೆಚ್.ಡಿ.ಕೋಟೆ: ಪೈಪ್ ಒಡೆದು ರಸ್ತೆಯಲ್ಲಿ ನೀರು ಹರಿಯುತ್ತಿದ್ದರೂ ಪಂಚಾಯಿತಿ ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ, ಹೆಚ್.ಡಿ.ಕೋಟೆ ತಾಲ್ಲೂಕಿನ ಎಂ.ಕನ್ನೇನಹಳ್ಳಿ ಗ್ರಾಮದ ಜನರು ಕಲುಸಿತ ನೀರನ್ನೆ ಕುಡಿಯುವ ಪರಿಸ್ಥಿತಿ ಎದುರಾಗಿದ್ದರೂ ಪಿ ಡಿ ಒ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ.
ಪೈಪ್ ಒಡೆದು ಸರಿ ಸುಮಾರು ಆರು ತಿಂಗಳಾದರು ಪಿಡಿಒ ಈ ಬಗ್ಗೆ ಗಮನ ಹರಿಸಿಲ್ಲ. ಬಚಿಕ್ಕಕೆರೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಂ ಕನ್ನೇನಹಳ್ಳಿ ಗ್ರಾಮದ ಸದಸ್ಯ ಮಲ್ಲೇಶ ಹಲವು ಬಾರಿ ಈ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಕ್ರಮಕೈಗೊಳ್ಳದೇ ಮೀನಾ ಮೇಷ ಎಸಗುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆ ಮತ್ತು ಅಂಗನವಾಡಿ ಹಾಗೂ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲದೆ ಬವಣಿಸುತ್ತಿದ್ದಾರೆ. ನೀರು ಹರಿದು ಗುಂಡಿಗಳಲ್ಲಿ ನಿಂತು ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಎಂ ಕನ್ನೇನಹಳ್ಳಿ ಜನರ ಗೋಳು ನಿವಾರಿಸುತ್ತಾರಾ ಎಂದು ಕಾದು ನೋಡಬೇಕಿದೆ.
ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಬೆವರಿಳಿಸಿ ಎಂ ಕನ್ನೇನಹಳ್ಳಿ ಗ್ರಾಮದ ಜನರ ಗೋಳು ನಿವಾರಿಸುತ್ತಾರೆಯೇ ಎಂದು ಗ್ರಾಮಸ್ಥರು ಕಾಯುತ್ತಿದ್ದು, ಸಮಸ್ಯೆ ಪರಿಹಾರವಾಗದಿದ್ದರೆ, ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


