ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಕ್ರಮ ಆಸ್ತಿ ಮತ್ತು ಹಣ ವರ್ಗಾವಣೆ ಆರೋಪದಲ್ಲಿ ಪದೇಪದೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಶುಕ್ರವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಕೆಪಿಸಿಸಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


